October 2021

ಇಂದು ಸಂಜೆ ಪುನೀತ್ ಅಂತ್ಯ ಸಂಸ್ಕಾರಕ್ಕೆ ನಿರ್ಧಾರ| ಆಪ್ತ ವಲಯಕ್ಕಷ್ಟೇ ಭಾಗವಹಿಸಲು ಅವಕಾಶ|

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 6-6.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದೆ. ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು […]

ಇಂದು ಸಂಜೆ ಪುನೀತ್ ಅಂತ್ಯ ಸಂಸ್ಕಾರಕ್ಕೆ ನಿರ್ಧಾರ| ಆಪ್ತ ವಲಯಕ್ಕಷ್ಟೇ ಭಾಗವಹಿಸಲು ಅವಕಾಶ| Read More »

ಸದ್ಯಕ್ಕಿಲ್ಲ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ

ಮಂಗಳೂರು: ಸದ್ಯಕ್ಕೆ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ ಪುನರಾರಂಭವಾಗುವುದು ಅನುಮಾನವಾಗಿದ್ದು, ಈ ಕಾರಣ ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್‌ ಸಂಚಾರ ಪುನರಾರಂಭವಾಗುವು ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಆದರೆ, ಒಂದು ವಾರಗಳ ಕಾಲ ಅಂತರಾಜ್ಯ ಬಸ್‌ ಸಂಚಾರ ಪುನರಾರಂಭವಾಗದು ಎಂದು ದ.ಕ ಜಿಲ್ಲಾಡಳಿತ ಹೇಳಿದೆ. ಈ ವಿಚಾರವಾಗಿ ಕೇರಳ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ತಿಳಿಸಿದ್ದು, “ಕರ್ನಾಟಕ ಬಸ್‌ಗಳು ರಾಜ್ಯ ಪ್ರವೇಶಿಸುವುದಕ್ಕಾಗಲಿ, ನಮ್ಮ ಬಸ್‌ಗಳನ್ನು ಕರ್ನಾಟಕಕ್ಕೆ ಬಿಡುವುದಕ್ಕಾಗಲಿ

ಸದ್ಯಕ್ಕಿಲ್ಲ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ Read More »

ಇಂದು(ಅ.30) 3 ಲೋಕಸಭಾ ಹಾಗೂ 30 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ| ಕರ್ನಾಟಕದ ಹಾನಗಲ್, ಸಿಂದಗಿಯಲ್ಲಿ‌ ಮತದಾನ ಆರಂಭ

ನವದೆಹಲಿ ​: 13 ರಾಜ್ಯಗಳಲ್ಲಿ ಹರಡಿರುವ ಮೂರು ಲೋಕಸಭಾ ಸ್ಥಾನಗಳು ಮತ್ತು 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಇಂದು ನಡೆಯುತ್ತಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದ್ದು ಚುನಾವಣೆ ಬಿಗಿ ಭದ್ರತೆಯ ನಡುವೆ ನಡೆಯುತ್ತಿದೆ. ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಉಪ ಚುನಾವಣೆಗಳ ಸಂದರ್ಭದಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಮಾರ್ಗಸೂಚಿಗಳನ್ನು ನಿರ್ವಹಿಸುವಂತೆ ಭಾರತೀಯ ಚುನಾವಣಾ ಆಯೋಗವು ಮತದಾನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಉಪಚುನಾವಣೆಯ ಸಮಯದಲ್ಲಿ

ಇಂದು(ಅ.30) 3 ಲೋಕಸಭಾ ಹಾಗೂ 30 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ| ಕರ್ನಾಟಕದ ಹಾನಗಲ್, ಸಿಂದಗಿಯಲ್ಲಿ‌ ಮತದಾನ ಆರಂಭ Read More »

ಇಂದು ಇಡೀ ದಿನ “ಅಭಿಮಾನಿ”ಗಳೊಂದಿಗೆ ”ಅಪ್ಪು”| ನಾಳೆ ಅಂತಿಮ ವಿಧಿವಿಧಾನ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ‌ ಗೌರವಗಳೊಂದಿಗೆ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ

ಇಂದು ಇಡೀ ದಿನ “ಅಭಿಮಾನಿ”ಗಳೊಂದಿಗೆ ”ಅಪ್ಪು”| ನಾಳೆ ಅಂತಿಮ ವಿಧಿವಿಧಾನ Read More »

ಪುನಿತ್ ವಿಧಿವಶ ಹಿನ್ನಲೆ| ನಾಳೆ ಖಾಸಗಿ‌ ಶಾಲೆಗಳಿಗೆ ರಜೆ

ಬೆಂಗಳೂರು: ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದ ಖಾಸಗಿ ಶಾಲೆಗಳಿಗೆ ರುಪ್ಸಾ ಕರ್ನಾಟಕದಿಂದ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಿಗೆ ರಜೆ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ

ಪುನಿತ್ ವಿಧಿವಶ ಹಿನ್ನಲೆ| ನಾಳೆ ಖಾಸಗಿ‌ ಶಾಲೆಗಳಿಗೆ ರಜೆ Read More »

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಅ.29 ರ ಶುಕ್ರವಾರ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ Read More »

ಸಾವಲ್ಲೂ‌ ಸಾರ್ಥಕತೆ‌ ಮೆರೆದ‌ ಪುನೀತ್| ಇಬ್ಬರು ಬಾಳಿಗೆ ಬೆಳಕಾದ ದೊಡ್ಮನೆ ಹುಡ್ಗ|

ಬೆಂಗಳೂರು: ಕೇವಲ 46ನೇ ವಯಸ್ಸಿನಲ್ಲಿಯೇ ತಮ್ಮ ಜೀವನದ ಪಯಣ ಮುಗಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಹೃದಯಾಘಾತದಿಂದ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಇನ್ನಿಲ್ಲ ಎಂಬ ಸುದ್ದಿ ಕನ್ನಡ ನಾಡಿಗೆ ನಂಬಲಸಾಧ್ಯವಾದ ಸಂಗತಿ. ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಂದೆ ವರನಟ ಡಾ.ರಾಜ್ ಕುಮಾರ್ ಅವರಂತೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ನೇತ್ರದಾನ ಮಾಡಿದ್ದಾರೆ. ಈ ಮೂಲಕ

ಸಾವಲ್ಲೂ‌ ಸಾರ್ಥಕತೆ‌ ಮೆರೆದ‌ ಪುನೀತ್| ಇಬ್ಬರು ಬಾಳಿಗೆ ಬೆಳಕಾದ ದೊಡ್ಮನೆ ಹುಡ್ಗ| Read More »

ಪುನಿತ್ ರಾಜ್ ಕುಮಾರ್ ಆರೋಗ್ಯ ಗಂಭೀರ| ಆಸ್ಪತ್ರೆಗೆ ಸಿಎಂ ಭೇಟಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವಂತ ಸಂದರ್ಭದಲ್ಲಿ, ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಅವರ ಆರೋಗ್ಯ ಸ್ಥಿತಿ ಗಂಭೀರ

ಪುನಿತ್ ರಾಜ್ ಕುಮಾರ್ ಆರೋಗ್ಯ ಗಂಭೀರ| ಆಸ್ಪತ್ರೆಗೆ ಸಿಎಂ ಭೇಟಿ Read More »

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಇನ್ನಿಲ್ಲ|

ಬೆಂಗಳೂರು: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್‌ ರಾಜಕುಮಾರ್‌ (46)ಇಹಲೋಕ ತ್ಯಜಿಸಿದ್ದಾರೆ. ಇಂದು ಮುಂಜಾನೆ ತೀವ್ರ ರೀತಿಯ ಹೃದಯಾಘಾತ ‌ಸಂಭವಿಸಿದ್ದು, ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರನ್ನು ನಗರದ‌ ವಿಕ್ರಂ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಅಪ್ಪು ಸಿನಿಮಾದಿಂದ ನಾಯಕ ನಟನಾಗಿ ಸಿನಿಮಾ ರಂಗದಲ್ಲಿ ‌ಮಿಂಚಿದ ಪುನಿತ್ ಬಾಲನಟನಾಗಿ

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಇನ್ನಿಲ್ಲ| Read More »

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಗಂಭಿರ ಸಮಸ್ಯೆ ಕಾಣಿಸಿಕೊಂಡಿಲ್ಲ ಎನ್ನಲಾಗಿದ್ದು, ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ಆಸ್ಪತ್ರೆಯ

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು Read More »