October 2021

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸಂಪಾಜೆಯ ಬಾಲಕಿ ಜೆಮಿಮಾ ಕೆ ಜಾನ್‌ ಇಂದು ನಿಧನಳಾಗಿದ್ದಾಳೆ. ಜನಪರ ಹೋರಾಟಗಾರ ಕಾಂಟ್ರಾಕ್ಟರ್ ಕೆ.ಪಿ.ಜಾನಿಯವರ ಮಗಳು ಜೆಮಿಮಾ ಅಪರೂಪದ ಮಾರಣಾಂತಿಕ ವೈರಸ್‌ಗೆ ತುತ್ತಾಗಿದ್ದಳು. ಮಗುವನ್ನು ಬದುಕಿಸುವುದಕ್ಕೆ ಕುಟುಂಬ ಹರಸಾಹಸ ನಡೆಸಿತ್ತು. ಹಿತೈಷಿ, ಸ್ನೇಹಿತರ, ಬಂಧು ಬಳಗದ ಪ್ರಾರ್ಥನೆ ಫಲಿಸಲಿಲ್ಲ. ಐದು ವರ್ಷದ ಜೆಮಿಮಾ ಗುರುವಾರ ಮೃತಪಟ್ಟಿದ್ದಾಳೆ ಎಂದು ಸ್ನೇಹಿತ ಮೂಲಗಳು ತಿಳಿಸಿವೆ.

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ Read More »

ದೊಡ್ಡ ಕುಳಗಳಿಗೆ ಹನಿಟ್ರ್ಯಾಪ್| ಕಾಂಗ್ರೆಸ್ ‌ನಾಯಕಿ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಕಾಂಗ್ರೆಸ್​ ನಾಯಕಿಯೊಬ್ಬಳನ್ನ ಬಂಧಿಸಿದ್ದಾರೆ. ಈಕೆಯ ವಿರುದ್ಧ ಪ್ರಭಾವಿ ರಾಜಕಾರಣಿಗಳು, ಐಪಿಎಸ್​, ಐಎಎಸ್ ಅಧಿಕಾರಿಗಳೂ ಸೇರಿದಂತೆ ಹೈ-ಪ್ರೊಫೈಲ್​ ವ್ಯಕ್ತಿಗಳನ್ನ ಯಾಮಾರಿಸಿ ಹೈಟೆಕ್ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಹಣ ಪೀಕಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ವಿದ್ಯಾ ಎನ್ನುವವರು ಇದೀಗ ಹನಿಟ್ರ್ಯಾಪ್ ಆರೋಪದಲ್ಲಿ ಬಂಧಿತರಾಗಿರುವವರು. ಎಐಸಿಸಿ ಸದಸ್ಯೆ ಆಗಿರೋ ವಿದ್ಯಾ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಕೂಡ ಆಗಿದ್ದರೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾ, ತನ್ನ ಮೇಕ್​ ಅಪ್ ಭರಿತ ಸೌಂದರ್ಯದ

ದೊಡ್ಡ ಕುಳಗಳಿಗೆ ಹನಿಟ್ರ್ಯಾಪ್| ಕಾಂಗ್ರೆಸ್ ‌ನಾಯಕಿ ಅರೆಸ್ಟ್ Read More »

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್|

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿದ್ದು, ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿದ್ದು, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನ ನಾನೇ ಖುದ್ದು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೋಟಿಗೊಬ್ಬ 3 ರಿಲೀಸ್ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಕಿಚ್ಚನ ಅಭಿಮಾನಿಗಳು

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್| Read More »

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ|

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ” ಅಂತಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, “ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್‌ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ. ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ಕೆಲಸ ನಿಮ್ಮದು ಎಂದು ತಿಳಿದುಕೊಳ್ಳಬಹುದೇ?” ಎಂದು

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ| Read More »

ಮತ್ತೊಬ್ಬ ಬಿಜೆಪಿ ಶಾಸಕನ ಅಶ್ಲೀಲ ಸಿಡಿ ಬಿಡುಗಡೆ ಫೋಟೋ ವೈರಲ್| ಯತ್ನಾಳ ಬೆಂಬಲಿಗರಿಂದ ದೂರು ದಾಖಲು| ಅಂತದ್ದೇನೈತಿ ಆ ಫೋಟೋದಾಗ ಗೊತ್ತೇನ್ರಿ?

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡತೊಡಗಿದೆ. ‘ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ’ ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಪೋಸ್ಟ್ ಹರಿದಾಡತೊಡಗಿದೆ. ಈ ಸಂಬಂಧ ಯತ್ನಾಳ ಅವರ ಆಪ್ತ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ವಿಜಯಪುರದ ಸೈಬರ್

ಮತ್ತೊಬ್ಬ ಬಿಜೆಪಿ ಶಾಸಕನ ಅಶ್ಲೀಲ ಸಿಡಿ ಬಿಡುಗಡೆ ಫೋಟೋ ವೈರಲ್| ಯತ್ನಾಳ ಬೆಂಬಲಿಗರಿಂದ ದೂರು ದಾಖಲು| ಅಂತದ್ದೇನೈತಿ ಆ ಫೋಟೋದಾಗ ಗೊತ್ತೇನ್ರಿ? Read More »

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ

ಮಂಗಳೂರು: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಡರಾತ್ರಿ ಮಾಲೆಮಾರ್ ಬಳಿ ಸಂಭವಿಸಿದೆ. ಪಂಜಿಮೊಗರು ನಿವಾಸಿ ರಾಜೇಶ್ (45) ಗಾಯಗೊಂಡವರು. ಇವರು ಕೊಟ್ಟಾರದಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ. ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ದುಷ್ಕರ್ಮಿಗಳಿಂದ ಚೂರಿ ಇರಿತ Read More »

ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಂಗಳೂರು: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯಲ್ಲಿ ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಹಮ್ಮಿಕೊಂಡಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆ ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು

ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಗುರುವಾರ ಆಯುಧ ಪೂಜೆ ಮತ್ತು ಶುಕ್ರವಾರ ವಿಜಯದಶಮಿ ಹಬ್ಬ ಆಚರಿಸಲಾಗುತ್ತಿದ್ದು, ಕಡಲನಗರಿ‌ ಸಂಭ್ರಮದಿಂದ ಅಣಿಯಾಗುತ್ತಿದೆ. ಬೆಲೆ ಏರಿಕೆ ನಡುವೆಯೂ ನಗರ ಮತ್ತು ಹೊರವಲಯದ ಮಾರುಕಟ್ಟೆಗಳಲ್ಲಿ ಪೂಜೆಗಾಗಿ ಹೂವು, ಹಣ್ಣು ಖರೀದಿ ಭರಾಟೆಯು ಬಿರುಸು ಪಡೆದಿತ್ತು. ಬಹುತೇಕ ಕಡೆ ರಸ್ತೆ ಬದಿಯಲ್ಲಿ ಉತ್ತರ ಕರ್ನಾಟಕದಿಂದ ಆಗಮಿಸಿದ ಹೂವಿನ ವ್ಯಾಪಾರಿಗಳು ಬುಧವಾರ ಭರ್ಜರಿ ವ್ಯಾಪಾರ ನಡೆಸಿದ್ದಾರೆ. ಮುಂಜಾನೆಯಿಂದಲೇ ಲಾರಿಗಳಲ್ಲಿ ಸೇವಂತಿಗೆ, ಮಲ್ಲಿಗೆ, ಗುಲಾಬಿ ಹೂಗಳು ಮತ್ತು ಲಿಂಬೆ ಹಣ್ಣು ತಂದು ಅಲ್ಲಲ್ಲಿ ರಾಶಿ ಹಾಕಿ

ಕಡಲನಗರಿಯಲ್ಲಿ ನವರಾತ್ರಿ ಸಡಗರ| ವಿವಿಧೆಡೆ ವಿಶೇಷ ಪೂಜೆ, ಪುನಸ್ಕಾರ ಸಂಭ್ರಮ Read More »

ಹಾವು ಕಚ್ಚಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು| ಅತಿ ಅಪರೂಪದ ಪ್ರಕರಣವೆಂದ ಕೋರ್ಟ್|

ಕೊಲ್ಲಂ: ತನ್ನ ಪತ್ನಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ. ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ

ಹಾವು ಕಚ್ಚಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆಯ ತೀರ್ಪು| ಅತಿ ಅಪರೂಪದ ಪ್ರಕರಣವೆಂದ ಕೋರ್ಟ್| Read More »

ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ಯುವಕ

ಶಿವಮೊಗ್ಗ: ಯುವಕನೊರ್ವ ಮನೆಯಿಂದ ಬೈಕ್ ನಿಂದ ಹೊರಟು ಮಾರ್ಗ ಮಧ್ಯದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ತೀರ್ಥಹಳ್ಳಿ ತಾಲೂಕಿನ ಕೊಣಂದೂರು ಸಮೀಪದ ಅಕ್ಲಾಪುರದಲ್ಲಿ ನಡೆದಿದೆ. ಮೃತ ಯುವಕ ಅಕ್ಲಾಪುರ ವಾಸಿ ರಾಘವೇಂದ್ರ(40) ಎಂದು ಗುರುತಿಸಲಾಗಿದೆ. ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿವ್ಯಾಜ್ಯದ ವೈಯಕ್ತಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತ ವ್ಯಕ್ತಿ ಪತ್ನಿ,ಎರಡು ಮಕ್ಕಳನ್ನು ಅಗಲಿದ್ದು, ಈ ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ

ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ಯುವಕ Read More »