October 2021

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು

ಸುಳ್ಯ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೇವಳದ ಹೂವಪ್ಪ ಗೌಡ ಎಂದು ಗುರುತಿಸಲಾಗಿದೆ. ಹೂವಪ್ಪ ಗೌಡರವರು ಮಧ್ಯಾಹ್ನ ಒಂದೂವರೆ ಗಂಟೆಯ ಸಮಯದಲ್ಲಿ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಬಿಳಲು ಬಳ್ಳಿಗೆ ಅವರು ಸಿಲುಕಿದರೆನ್ನಲಾಗಿದೆ. ಬಳ್ಳಿ ಅವರ ದೇಹಕ್ಕೆ ಸಿಲುಕಿ ಬಿಗಿದಿದ್ದು ಇದನ್ನು ಕಂಡ ಮನೆಯವರು […]

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು Read More »

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಪೊಲೀಸ್ ಆಯುಕ್ತರಿಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೇಸ್ ಪಕ್ಷದ ವಕ್ತಾರೆ ಲಾವಣ್ಯ ಬಲ್ಲಾಳ್ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ, ಮಂಗಳೂರು ಪೊಲೀಸ್

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಡೆದ ಭಾಬಾನಿಪುರ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಹಿಂದೆ ಹಾಕುವ ಮೂಲಕ ತಮ್ಮ ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳಲು ಅದ್ಭುತ ಗೆಲುವು ದಾಖಲಿಸಿದ್ದಾರೆ. ಡಿಲಿಮಿಟೇಶನ್ ನಂತರ 2011ರಲ್ಲಿ ರೂಪುಗೊಂಡ ಭಬಾನಿಪುರ ಕ್ಷೇತ್ರವು ಪ್ರಾರಂಭದಿಂದಲೂ ತೃಣಮೂಲ ಕಾಂಗ್ರೆಸ್ (ಟಿ.ಎಂ.ಸಿ.) ಭದ್ರಕೋಟೆಯಾಗಿದೆ. ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸವು ಈ ಕ್ಷೇತ್ರದ ಅಡಿಯಲ್ಲಿ ಬರುತ್ತದೆ. ಫಲಿತಾಂಶಗಳು ಪ್ರಕಟವಾದ ನಂತರ ಸಂಭವನೀಯ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ Read More »

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ

ಮಂಗಳೂರು: ವಾಮಂಜೂರಿನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದ ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲ ಸಮಯ ಪ್ರವಾಸಿಗರು ಸೇರಿದಂತೆ ಅಲ್ಲಿಯ ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿದ ಘಟನೆ ಜುಲೈ ತಿಂಗಳಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.ಇನ್ನು ಈ ಘಟನೆ ಮೃಗಾಲಯದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಪಿಲಿಕುಳದಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿ, ನಂತರದಲ್ಲಿ ಸಿಂಹದ ಎನ್‌ಕ್ಲೋಶರ್ ಇದೆ. ಎನ್‌ಕ್ಲೋಶರ್ ಎಂದರೆ ಮೃಗಾಲಯದ ಪ್ರಾಣಿಗಳಿಗೆ ವಿಹರಿಸುವುದಕ್ಕೆ ಬೇಕಾದ ವಿಶಾಲವಾದ ಆವರಣವಾಗಿದೆ.

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ Read More »

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು

ಹಾಸನ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹನುಮಂತ ನಗರದಲ್ಲಿ ನಡೆದಿದೆ. ಬೇಲೂರಿನತ್ತ ಬರುತ್ತಿದ್ದ ಶಾಸಕರ ಕಾರು ಚಾಲಕ ಅಪಘಾತವೆಸಗಿದ್ದು, 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಚಾಲಕನ ಪಾನಮತ್ತನಾಗಿ ಕಾರು ಚಾಲನೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಕಾರು ರಿಪೇರಿಗೆಂದು ಬೆಂಗಳೂರಿಗೆ ಹೊರಟಿದ್ದ ಎನ್ನಲಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು Read More »

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ|

ಅಹಮದಾಬಾದ್: ತನ್ನ ಸ್ವಂತ ಪತ್ನಿಯನ್ನು 500 ರೂ.ಗೆ ಮಾರಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಖರೀದಿಗೆ ಹಣ ನೀಡಿದ ಪುರುಷ ಏಕಾಂತ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ ವೇಳೆ ಈ ಘಟನೆ ತಿಳಿದುಬಂದಿದೆ. ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಸೋನು ಶರ್ಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಠಾಣೆಯ ಪ್ರಭಾರಿ ಮದನಲಾಲ್

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ| Read More »

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ|

ಮಂಗಳೂರು: ನಗರದ ಹೊರವಲಯದ ಗುರುಪುರ ಬಳಿಯ ಚಿಲಿಂಬಿ ಗುಡ್ಡೆ ಎಂಬಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆ ವೇಳೆ ಕೃತ್ಯ ಬೆಳಕಿಗೆ ಬಂದಿದ್ದು, ಗಾಂಜಾ ಮಾಫಿಯಾ ಶಂಕೆ ವ್ಯಕ್ತವಾಗಿದೆ. ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಒಬ್ಬ ಹಿಂದೂ ಯುವಕ ಹಾಗೂ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು ಪತ್ತೆಯಾಗಿದ್ದು, ಇವರು ಬಳಸಿದ್ದ ಕಾರ್ ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಅನುಮಾನ ಮೂಡಿಸಿದೆ. ಪತ್ತೆಯಾದ ನಾಲ್ವರನ್ನೂ ಬಜ್ಪೆ ಪೋಲಿಸ್

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ| Read More »

ಅ. 7 ರಿಂದ ಅ.16ವರೆಗೆ ಮಂಗಳೂರು ದಸರಾ| ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕೋವಿಡ್ ಲಸಿಕೆ ವ್ಯವಸ್ಥೆ

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಪ್ರತಿ ವರ್ಷ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆಯೊಂದಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಕೊರೊನಾದಿಂದಾಗಿ ಈ ಬಾರಿಯೂ ಮಂಗಳೂರು ದಸರಾ ಮರೆವಣಿಗೆ ಇಲ್ಲದೆ ಶಾರದಾ ಮೂರ್ತಿಯ ವಿಸರ್ಜನೆಯನ್ನು ಕಳೆದ ವರ್ಷದಂತೆ ಈ ವರ್ಷವೂ, ಕ್ಷೇತ್ರದ ಆವರಣದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ. ಅದೇ ರೀತಿ ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ ವಾಕ್ಯದಡಿ ದಸರಾ ಕಾರ್ಯಕ್ರಮ ನಡೆಯಲಿದೆ.

ಅ. 7 ರಿಂದ ಅ.16ವರೆಗೆ ಮಂಗಳೂರು ದಸರಾ| ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕೋವಿಡ್ ಲಸಿಕೆ ವ್ಯವಸ್ಥೆ Read More »

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ| ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಸೇರಿ ಹಲವರ ಬಂಧನ|

ಮುಂಬೈ: ಪಾರ್ಟಿಯೊಂದರಲ್ಲಿ ಡ್ರಗ್ಸ್‌ ಬಳಕೆ ಮಾಡುತ್ತಿರುವ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಪ್ರಯಾಣಿಕರ ಕ್ರೂಸ್‌ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ನೂರಾರು ಮಂದಿ ಪ್ರಯಾಣಿಕರಿದ್ದ ಹಡಗು ಗೋವಾ ಕಡೆಗೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಮೀರ್‌ ವಾಂಖೆಡೆ ನೇತೃತ್ವದ ಎನ್‌ಸಿಬಿಯ ತಂಡವು ಹಡಗಿನಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಿವುಡ್‌ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ‌ ಹಲವರನ್ನು

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ| ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಸೇರಿ ಹಲವರ ಬಂಧನ| Read More »

ಕಲುಷಿತ ನೀರು ಸೇವನೆ| ನಾಲ್ವರು ಸಾವು

ವಿಜಯಪುರ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಬೋರ್ ವೆಲ್ ಪೈಪ್ ಗೆ ಚರಂಡಿ ನೀರು ಮಿಶ್ರಣಗೊಂಡಿದ್ದರಿಂದಾಗಿ, ಕಲುಷಿತ ನೀರು ಸೇವಿಸಿದಂತ ಗ್ರಾಮದ ಅನೇಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಗ್ರಾಮಸ್ಥರಲ್ಲಿ 10 ದಿನಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿನ ಕುಡಿಯುವ ನೀರಿನ ಪೈಪ್ ಗೆ ಚರಂಡಿ ನೀರು ಮಿಶ್ರಣಗೊಂಡಿದೆ. ಇದೇ ನೀರನ್ನು ಗ್ರಾಮದ ಜನರಿಗೆ ಕುಡಿಯಲು ಬಿಟ್ಟ ಕಾರಣ, ಗ್ರಾಮದಲ್ಲಿನ ಅನೇಕರಿಗೆ ಹೊಟ್ಟೆನೋವು, ವಾಂತಿ, ಬೇಧಿ ಕಾಣಿಸಿಕೊಂಡಿದೆ.

ಕಲುಷಿತ ನೀರು ಸೇವನೆ| ನಾಲ್ವರು ಸಾವು Read More »