Ad Widget .

ಬಾರಿಸು ಕನ್ನಡ ಡಿಂಡಿಮವಾ| ಕರುನಾಡಿನ ಬಗ್ಗೆ ನಿಮಗಿದು ಗೊತ್ತಿದೆಯೇ?

Ad Widget . Ad Widget .

ಸಮಗ್ರ ವಿಶೇಷ: 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಹಿಂದಿನ ಕತೆ ಮಾತ್ರ ರೋಚಕ.

Ad Widget . Ad Widget .

ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು.

ಕನ್ನಡ ರಾಜ್ಯೋತ್ಸವ ಇತಿಹಾಸ
ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ 1957ರ ವರಗೆ ರಾಜ್ಯಪಾಲರಾದರು.

”ಏಕೀಕರಣ” ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು.

ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿದ್ದರೂ ಸಾಮಾನ್ಯವಾಗಿ “ಕರು” ಮತ್ತು “ನಾಡು” ಸೇರಿ “ಎತ್ತರದ ಭೂಮಿ” ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದೂ ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾದ್ದರಿಂದ ಬ್ರಿಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.

ಕರ್ನಾಟಕಕ್ಕೆ ತನ್ನದೇ ಆದ ಪ್ರತ್ಯೇಕ ಬಾವುಟವಿದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ.

ಕನ್ನಡಕ್ಕೊಂದು ಬಾವುಟ ಅವಶ್ಯಕತೆಯನ್ನು ಮನಗೊಂಡ ಕನ್ನಡದ ಹೋರಾಟಗಾರರಾದ ಎಂ ರಾಮಮೂರ್ತಿಗಳು ಹಳದಿ ಹಾಗೂ ಕೆಂಪು ಬಣ್ಣ ಬಳಸಿ, ಬಾವುಟವನ್ನು ಸಿದ್ದಪಡಿಸಿದರು. ಮೂಲತಃ ಹಳದಿ ಬಣ್ಣವು ಕನ್ನಡಾಂಬೇಯ ಆರಿಶಿನ ಮತ್ತು ಕುಂಕುಮವನ್ನು ಸೂಚಿಸುತ್ತದೆ ಹಾಗೂ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ. ಕನ್ನಡಿಗರೂ ಶಾಂತಿಗೆ ಬದ್ಧ, ಯುದ್ಧಕ್ಕೂ ಸಿದ್ಧ ಎಂಬ ಸಂದೇಶವನ್ನು ನೀಡುತ್ತದೆ .

ಆರಂಭದಲ್ಲಿ ಕನ್ನಡ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವಿನಲ್ಲಿ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಮುದ್ರಿಸಲು ಸ್ವಲ್ಪ ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಯಿತು.

ಹೀಗೆ ಅಸ್ತಿತ್ವಕ್ಕೆ ಬಂದ ಕನ್ನಡವನ್ನು ನಾವಿಂದು ಉಳಿಸಿ ಬೆಳೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ’ ಎಂದು ಇದೇ ವೇಳೆ ಪ್ರಮಾಣ ಮಾಡೋಣ. ನವೆಂಬರ್ ಗಷ್ಟೇ ಕನ್ನಡಿಗರಾಗದೇ ಎಲ್ಲೆಲ್ಲೂ ಯಾವಾಗಲೂ ಕನ್ನಡದ ಕಂಪನ್ನು ಪಸರಿಸೋಣ

Leave a Comment

Your email address will not be published. Required fields are marked *