ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನ.1 ರ ಸೋಮವಾರ ನಡೆದಿದೆ.

ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಸಿಬ್ಬಂದಿಗಳ ಎಡವಟ್ಟಿನಿಂದ ಬಾವುಟವೂ ಉಲ್ಟಾ ಆಗಿ ಹಾರಿತು. ತಕ್ಷಣ ಅಧಿಕಾರಿಗಳು ಗಮನಿಸಿ ರಾಷ್ಟ್ರ ಧ್ವಜವನ್ನು ಸರಿಪಡಿಸಲಾಯಿತು.