Ad Widget .

ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂ

Ad Widget . Ad Widget .

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಹಾಗೂ ವಾಯುಮಾಲಿನ್ಯದ ನಡುವೆ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತ ಹೈಕೋರ್ಟ್ ಹೇಳಿತ್ತು. ಆದರೆ, ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗೊತ್ತಿ, ಹೊಸ ತೀರ್ಪು ನೀಡಿದೆ.

Ad Widget . Ad Widget .

ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ವಿಚಾರಣೆ ವೇಳೆ ಶುಕ್ರವಾರದ ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ಮಾತನಾಡಿದ ನ್ಯಾಯಮೂರ್ತಿಗಳು, ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ ಅವರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿಷೇಧಿತ ಪಟಾಕಿ ಮತ್ತು ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳದಿರುವುದನ್ನು ಖಚಿತಪಡಿಸಿಕೊಳ್ಳುವ ಸಾಧ್ಯತೆ ಕುರಿತು ಪರಿಶೀಲಿಸಲು ಹೇಳಿದರು.

ಹಸಿರು ಪಟಾಕಿಗಳ ಬಗ್ಗೆ ಸುಪ್ರೀಂ ಕೋರ್ಟ್ ನ ಮೂರು ಆದೇಶಗಳು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಎರಡು ಆದೇಶಗಳ ಹೊರತಾಗಿಯೂ ಕೋಲ್ಕತ್ತ ಹೈಕೋರ್ಟ್ ಹಸಿರು ಪಟಾಕಿಗಳನ್ನು ನಿಷೇಧಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಉತ್ತಮವಾಗಿದ್ದರೆ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡುಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಗಳು ಹೇಳುತ್ತವೆ ಎಂದು ಪಟಾಕಿ ತಯಾಕರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ಸೋಮವಾರ ವಿಚಾರಣೆ ವೇಳೆ ಹೇಳಿದರು.

ಪರಿಸರ ಸಂರಕ್ಷಣೆ ಹಾಗೂ ಜನರ ಹಕ್ಕುಗಳ ರಕ್ಷಣೆ ಉದ್ದೇಶದಿಂದ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸುವಂತೆ ಕೋರಿ ಪರಿಸರ ಕಾರ್ಯಕರ್ತೆ ರೋಶನಿ ಅಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ಕೋಲ್ಕತ್ತಾ ಹೈಕೋರ್ಟ್ ಆದೇಶ ಬಂದಿದೆ.
ಭಾರತದ ಅನೇಕ ನಗರಗಳಂತೆ ಬಂಗಾಳದ ರಾಜಧಾನಿ ಕೋಲ್ಕತ್ತಾವು ಇತ್ತೀಚಿನ ವರ್ಷಗಳಲ್ಲಿ ಅತ್ಯಧಿಕ ವಾಯುಮಾಲಿನ್ಯ ಮಟ್ಟವನ್ನು ದಾಖಲಿಸಿದೆ. 2019ರಲ್ಲಿ ದಾಖಲಾದ ಗುಣಮಟ್ಟವು ಹಾಗೆಯೇ ಮುಂದುವರಿದರೆ ಇಲ್ಲಿನ ಜನತೆ 9 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಸಂಶೋಧಕರ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.

Leave a Comment

Your email address will not be published. Required fields are marked *