ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.6ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನ.2ರಂದ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಮುಂದುವರಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 3ರಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇದೇ 6ರಿಂದ ಮಳೆ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು.