Ad Widget .

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ| ನೀರಜ್ ಛೋಪ್ರಾ ಗೆ ಖೇಲ್ ರತ್ನ

ನವದೆಹಲಿ : ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮಂಗಳವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ.

Ad Widget . Ad Widget .

ಪ್ರಮುಖ ಖೇಲ್ ರತ್ನ ವಿಜೇತರ ಪಟ್ಟಿಯಲ್ಲಿ ಒಲಿಂಪಿಯನ್ ನೀರಜ್ ಚೋಪ್ರಾ, ಲೊವ್ಲಿನಾ ಬೊರ್ಗೊಹೈನ್ ಮತ್ತು ರವಿ ದಹಿಯಾ ಸೇರಿದ್ದಾರೆ.

Ad Widget . Ad Widget .

35 ಅರ್ಜುನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಭಾರತದ ಹೆಚ್ಚಿನ ಪ್ಯಾರಾಲಿಂಪಿಕ್ ಪದಕ ವಿಜೇತರು ಮತ್ತು ಕ್ರಿಕೆಟಿಗರಾದ ಶಿಖರ್ ಧವನ್ ಮತ್ತು ಮಿಥಾಲಿ ರಾಜ್ ಸೇರಿದ್ದಾರೆ.

ಪ್ರಶಸ್ತಿ ಪುರಸ್ಕೃತರು ನವೆಂಬರ್ 13, 2021ರಂದು (ಶನಿವಾರ) ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ. ಕೋವಿಡ್​ನಿಂದಾಗಿ ಕಳೆದ ವರ್ಷ ಪ್ರಶಸ್ತಿ ಕಾರ್ಯಕ್ರಮವನ್ನು ಆನ್‌ಲೈನ್‌ನಲ್ಲಿ ನಡೆಸಲಾಗಿತ್ತು. ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಗೆ ಸೇರಿಸಲಾಗಿದೆ. ದ್ರೋಣಾಚಾರ್ಯ ಪ್ರಶಸ್ತಿಗೆ ಒಟ್ಟು 10 ಕೋಚ್‌ಗಳನ್ನು ಆಯ್ಕೆ ಮಾಡಲಾಗಿದೆ.

Leave a Comment

Your email address will not be published. Required fields are marked *