Ad Widget .

ದಿ.ಪುನೀತ್ ರಾಜ್ ಕುಮಾರ್ ಗೆ ಪ್ರತಿಷ್ಟಿತ ‘ಬಸವಶ್ರೀ’ ಘೋಷಣೆ

ಚಿತ್ರದುರ್ಗ: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್​​​ ಅವರಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದ ಮುರುಘಾಮಠ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಸವಶ್ರೀ ಪ್ರಶಸ್ತಿ’ ಮೊತ್ತ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು, ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್​​​ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *