Ad Widget .

ರಾಜ್ಯದಲ್ಲೂ ತೈಲದರಗಳ ಅಬಕಾರಿ ಸುಂಕ ಕಡಿತ ನಿರ್ಧಾರ| ಕೊನೆಗೂ ಎರಡಂಕಿಗೆ ಕುಸಿಯಲಿದೆ‌ ತೈಲಬೆಲೆ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್​, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.

Ad Widget . Ad Widget .

ರಾಜ್ಯ ಸರ್ಕಾರದ ಈ ನಿರ್ಧಾರ ನ.4ರ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

Leave a Comment

Your email address will not be published. Required fields are marked *