Ad Widget .

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

Ad Widget . Ad Widget .

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.

Ad Widget . Ad Widget .

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ವಿಶ್ವದಾದ್ಯಂತ ಇರುವ ಎಲ್ಲಾ ನಮ್ಮ ಪ್ರೀತಿಯ ಕನ್ನಡಿಗರಿಗೆ ಅತ್ಯಂತ ಸಂತೋಷ ಮತ್ತು ಸಮೃದ್ಧ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ‘ಬೆಳಕಿನ ಹಬ್ಬ’ ನಿಮ್ಮೆಲ್ಲರ ಜೀವನವನ್ನು ಆರೋಗ್ಯ, ಸಂಪತ್ತು, ಸಂತೋಷ ಮತ್ತು ಯಶಸ್ಸಿನಿಂದ ಬೆಳಗಲಿ, ನೀವು ಎಲ್ಲಿಯೇ ಇದ್ದರೂ ನಮ್ಮ ಭೂಮಿಗೆ ಹೆಚ್ಚಿನ ಕೀರ್ತಿಯನ್ನು ತನ್ನಿ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *