ಕೊರೊನಾ ಇಳಿಕೆ ಹಿನ್ನೆಲೆ| ರಾಜ್ಯದಲ್ಲಿ ನೈಟ್ ಕರ್ಪ್ಯೂ ತೆರವು|

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದೆ.

Ad Widget ... ..

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಕೊರೋನಾ ಕಾರಣದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ಆಗಾಗ ಬದಲಾವಣೆ ಮಾಡಲಾಗಿತ್ತು. ಈಗ 18 ತಿಂಗಳ ನಂತರ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ.

Ad Widget

ಕೊರೋನಾ ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಕುದುರೆ ರೇಸ್ ನಡೆಸಲು ಅವಕಾಶ ನೀಡಲಾಗಿದೆ. 2 ಡೋಸ್ ಲಸಿಕೆ ಪಡೆದವರಿಗೆ ರೇಸ್ ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ನೈಟ್ ಕರ್ಫ್ಯೂ ವಾಪಸ್ ಪಡೆದಿರುವುದರಿಂದ ವಾಣಿಜ್ಯ ಚಟುವಟಿಕೆಗಳಿಗೆ ಮತ್ತಷ್ಟು ಅನುಕೂಲವಾಗಲಿದೆ. ಆರ್ಥಿಕತೆ ಚೇತರಿಕೆಗೂ ಅನುಕೂಲವಾಗಲಿದೆ.

Leave a Comment

Your email address will not be published. Required fields are marked *