Ad Widget .

ಹಾಸನಾಂಬೆ ದೇವಿ ದರ್ಶನಕ್ಕೆ ತೆರೆ| ಲಕ್ಷಾಂತರ ಜನರಿಂದ ನಡೆಯಿತು ದೇವಿ ದರ್ಶನ|

ಹಾಸನ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು (ನವೆಂಬರ್ 6) 1 ಗಂಟೆ 4 ನಿಮಿಷಕ್ಕೆ ತೆರೆಬಿದ್ದಿದೆ.

Ad Widget . Ad Widget .

ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗುಲದ ಒಳಗೆ ಪೂಜಾ ಕೈಂಕರ್ಯ ನಡೆಸಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಹಾಸನದ ಜಿಲ್ಲಾಧಿಕಾರಿ, ಎಸ್​ಪಿ, ಆಡಳಿತಾಧಿಕಾರಿ ಸಮ್ಮುಖದಲ್ಲಿ ದೇಗುಲ ಮುಚ್ಚಲಾಗಿದೆ. ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿತ್ತು. 10ನೇ ದಿನವಾದ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ.

Ad Widget . Ad Widget .

ಶನಿವಾರ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸಹಿತ ಹಲವು ಪ್ರಮುಖರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ. ಕಾನೂನುಬಾಹಿರ ಚಟುವಟಿಕೆ ಕಂಡುಬಂದ್ರೆ ಮಾಹಿತಿ ನೀಡಿ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಜನರು ಕಾನೂನು ಕೈಗೆತ್ತಿಕೊಳ್ಳಬಾರದು, ಅದು ತಪ್ಪಾಗುತ್ತೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

ಹಾಸನಾಂಬೆ ದೇಗುಲಕ್ಕೆ‌ಬೇಟಿ ನೀಡಬೇಕು ಎನ್ನೋದು ಬಹಳ ದಿನದಿಂದ ಮನಸ್ಸಿನಲ್ಲಿ ಇತ್ತು. ಇಂದು ಪತ್ನಿ ಜೊತೆಗೆ ಬಂದು ಮುಖ್ಯವಾದ ದಿನ ದರ್ಶನ ಮಾಡಿಧ್ದು ಖುಷಿಯಾಗಿದೆ. ಹಾಸನಾಂಬೆ ಎಲ್ಲರಿಗೂ ಶುಭವ ತರಲಿ ಎಂದು ಹಾರೈಸುತ್ತೇನೆ. ಕಳೆದ ಹತ್ತು ದಿನಗಳಿಂದ ಹಾಸನಾಂಬೆ ಉತ್ಸವ ಚನ್ವಾಗಿ ಆಗಿದೆ. ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಎಲ್ಲರಿಗೂ ಒಳಿತಾಗಲಿ ಎಂದು ಹಾಸನಾಂಬೆ ದರ್ಶನದ ಬಳಿಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ.

ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ಹಾಸನಾಂಬೆ ದೇಗುಲ ಮುಚ್ಚಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಇಂದು ಅವಕಾಶ ಇರುವುದಿಲ್ಲ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆ ಸಲ್ಲಿಕೆ ಮಾಡಿದ ಬಳಿಕ ಸಿಬ್ಬಂದಿ ದೇಗುಲದ ಬಾಗಿಲು ಮುಚ್ಚಿದ್ದಾರೆ. ಉಸ್ತುವಾರಿ ಸಚಿವ‌ ಕೆ.ಗೋಪಾಲಯ್ಯ,‌ ‌ಜಿಲ್ಲಾಧಿಕಾರಿ ಮತ್ತು ಗಣ್ಯರ‌ ಸಮ್ಮುಖ‌ದಲ್ಲಿ ದೇಗುಲ ಬಾಗಿಲು ಮುಚ್ಚಲಾಗಿದೆ. ಪ್ರಸಕ್ತ ವರ್ಷ ಅಕ್ಟೋಬರ್ 28 ರಂದು ದೇವಾಲಯ ತೆರೆಯಲಾಗಿತ್ತು. ಅಕ್ಟೋಬರ್ 28 ರಿಂದ ಈವರೆಗೆ ಲಕ್ಷಾಂತರ ಭಕ್ತರಿಂದ ದೇವಿ ದರ್ಶನ ಮಾಡಲಾಗಿದೆ.

Leave a Comment

Your email address will not be published. Required fields are marked *