Ad Widget .

ಸುಳ್ಯ| ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಶಾಕ್ ತಗುಲಿ ಸಾವು

ಸುಳ್ಯ| ತಾಲೂಕಿನ ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ನದಿಗೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟವರನ್ನು ಕರಂಗಲ್ಲಿನ ಪ್ರಕಾಶ್(37) ಎಂದು ಗುರುತಿಸಲಾಗಿದೆ.

Ad Widget . Ad Widget .

ಪ್ರಕಾಶ್ ನ.5 ರ ತಡರಾತ್ರಿ ಸಮೀಪದ ಕೊಲ್ಲಮೊಗ್ರು ಬಳಿಯ ಮಾಡಬಾಕಿಲು ಭಾಗದಲ್ಲಿ ನದಿಗೆ ಗೆಳೆಯನೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಬ್ಯಾಟರಿ ಬಳಸಿ ಮೀನು ಹಿಡಿಯುತ್ತಿರುವ ಸಂದರ್ಭದಲ್ಲಿ ಇನ್ವರ್ಟರ್ ಬ್ಯಾಟರಿಯ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯ ಠಾಣಾ ಎಸ್ ಐ ಜಂಬೂರಾಜ್ ಮಹಾಜನ್ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸಿರುವುದಾಗಿ ತಿಳಿದು ಬಂದಿದೆ. ಮೃತರು ತಾಯಿ, ಪತ್ನಿ,ಪುತ್ರಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *