ಗಾಂಧಿನಗರ: ಗುಜರಾತ್‌ನ ಕರಾವಳಿ ಭಾಗದಲ್ಲಿ ಭಾರತದ ಮೀನುಗಾರನನ್ನು ಪಾಕಿಸ್ತಾನ ನೌಕಾಪಡೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ನಡೆದಿದೆ.
ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ “ಜಲ್‌ಪರಿ” ಎಂಬ ಹೆಸರಿನ ಬೋಟ್‌ನಲ್ಲಿ ಪಾಕಿಸ್ತಾನದ ನೌಕಾಪಡೆಯು ಗುಂಡಿನ ದಾಳಿ ನಡೆಸಿತ್ತು. ಗುಂಡಿನ ದಾಳಿಯಿಂದ ಭಾರತದ ಒಬ್ಬ ಮೀನುಗಾರ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.







