Ad Widget .

ಉಡುಪಿ : ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸುತ್ತಿದ್ದ ಕಂಡಕ್ಟರ್‌ನ ಕಾಮದ ಪಿತ್ತ ಇಳಿಸಿದ ನರ್ಸಿಂಗ್ ವಿದ್ಯಾರ್ಥಿನಿಯರು

ಉಡುಪಿ: ಕಾಲೇಜು ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸ್ ವಶಕ್ಕೆ ನೀಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

Ad Widget . Ad Widget .

ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ‌ ಕಂಡಕ್ಟರ್ ಉಪೇಂದ್ರ ಎಂಬಾತನೇ ಪ್ರಕರಣದ ಆರೋಪಿ. ಈತ ಸಂತೆಕಟ್ಟೆಯ ನರ್ಸಿಂಗ್ ಕಾಲೇಜ್ ಬಳಿ ತನ್ನ ಸ್ಕೂಟಿಯಲ್ಲಿ ಬಂದು ಅಲ್ಲಿನ ವಿದ್ಯಾರ್ಥಿನಿಯರಿಗೆ ಪ್ಯಾಂಟ್ ಜಿಪ್ ಜಾರಿಸಿ ಕಳೆದ ಕೆಲವು ದಿನಗಳಿಂದ ಗುಪ್ತಾಂಗ ತೋರಿಸುತ್ತಿದ್ದ. ಮಾತ್ರವಲ್ಲದೆ ಕೈಸನ್ನೆ, ಕಣ್ಣ್ ಸನ್ನೆ ಮಾಡುತ್ತ ಯುವತಿಯರ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ದೂರಲಾಗಿದೆ.

Ad Widget . Ad Widget .

ಈ ನಡುವೆ ಕಾಲೇಜ್ ನ ಮುಖ್ಯಸ್ಥರು, ವಿದ್ಯಾರ್ಥಿನಿಯರು ಇರುವಾಗಲೇ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ ಕಂಡಕ್ಟರ್ ನ್ನು ಕಾಲೇಜ್ ನ ಸಿಬ್ಬಂದಿ, ವಿದ್ಯಾರ್ಥಿನಿಗಳು ಬಸ್ ಕಂಡಕ್ಟರ್ ನ‌ ಅಟ್ಟಡಿಸಿದ್ದಾರೆ. ಬಳಿಕ ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ ಆತನ ಕಿರುಕುಳದ ಮಾಹಿತಿ ತಿಳಿದು ಬಂದಿದೆ. ಬಳಿಕ ಉಡುಪಿ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸದ್ಯ ಕಾಮುಕ ಬಸ್ ಕಂಡಕ್ಟರ್ ಪೊಲೀಸ ಅತಿಥಿಯಾಗಿದ್ದಾನೆ.

Leave a Comment

Your email address will not be published. Required fields are marked *