ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಪೆರ್ಲಾಪು ಎಂಬಲ್ಲಿ ನಡೆದಿದೆ.

. Ad Widget . Ad Widget

ಪೆರ್ಲಾಪು ನಿವಾಸಿ ಸುರೇಶ್(38) ಮೃತಪಟ್ಟ ವ್ಯಕ್ತಿ.
ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್ ಅವರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

. Ad Widget . . Ad Widget . Ad Widget

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *