ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಲ್ಲಿಸಿತ್ತು. ಈ ಕಡತಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಈ ಹಿನ್ನಲೆಯಲ್ಲಿ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂಬುದಾಗಿ ಕರೆಯಲ್ಪಡಲಿವೆ.