Ad Widget .

ಖ್ಯಾತ ಹೃದ್ರೋಗ ತಜ್ಞ‌ ಡಾ| ಬಿ.ಎಂ ಹೆಗ್ಡೆಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

Ad Widget . Ad Widget .

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ.

Ad Widget . Ad Widget .

ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ಇಂದು ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸುವರು.

ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದ ಕೆಲವೇ ಭಾರತೀಯ ವೈದ್ಯರಲ್ಲಿ ಅಗ್ರಗಣ್ಯರು ಎಂಬ ಹೆಗ್ಗಳಿಕೆಗೆ ಪಾತ್ರರಾದವರು.

ಸುಲಭ ಆರೋಗ್ಯ ಚಿಕಿತ್ಸೆ ಮತ್ತು ಅನಾವಶ್ಯಕ ಚಿಕಿತ್ಸೆಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ ಉಪನ್ಯಾಸಗಳ ಮೂಲಕ ಜನಸಾಮಾನ್ಯರಲ್ಲೂ ಜನಪ್ರಿಯತೆಯನ್ನು ಗಳಿಸಿದ ವೈದ್ಯಶ್ರೇಷ್ಠ. ಡಾ| ಹೆಗ್ಡೆಯವರು ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ ಶಿಕ್ಷಣ ತಜ್ಞರಾಗಿ, ಆರೋಗ್ಯ ಸಲಹೆಗಾರರಾಗಿ, ವಾಗ್ಮಿಯಾಗಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.

Leave a Comment

Your email address will not be published. Required fields are marked *