Ad Widget .

“ಕರಾವಳಿ ಫೈರ್ ಬ್ರಾಂಡ್” ಅನಂತ ಕುಮಾರ್ ಹೆಗಡೆಗೆ ಒಲಿಯುತ್ತಾ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ?| ಅರವಿಂದ ಲಿಂಬಾವಳಿ ಹೆಸರೂ ಮಂಚೂಣಿಯಲ್ಲಿ..!

Ad Widget . Ad Widget .

ಬೆಂಗಳೂರು: ಹಾನಗಲ್ ಉಪ ಚುನಾವಣೆಯ ಸೋಲಿನ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ನಡೆಯಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿದೆ. ಈ ಸೋಲು ರಾಜ್ಯ ಬಿಜೆಪಿಯಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ್ ಕಟೀಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಹೈಕಮಾಂಡ್ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Ad Widget . Ad Widget .

ಇಂದು (ನ.9) ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ನೂತನವಾಗಿ
ಬಿಜೆಪಿಯಿಂದ ಅಧ್ಯಕ್ಷರಾಗಿ ಆಯ್ಕೆಯಾಗಬಹುದಾದ ಹೆಸರುಗಳಲ್ಲಿ ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಹಾಗೂ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಕೇಳಿಬರುತ್ತಿದೆ.

ಅನಂತಕುಮಾರ ಅಥವಾ ಅರವಿಂದ ಲಿಂಬಾವಳಿ ಅವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವಂತೆ ಈಗಾಗಲೇ ರಾಜ್ಯ ಘಟಕಕ್ಕೆ ಸೂಚನೆ ನೀಡಲಾಗಿದೆ ಎಂದೂ ಹೇಳಲಾಗುತ್ತಿದೆ. ರಾಜ್ಯದ ಮಂತ್ರಿಮಂಡಲದಲ್ಲಿ ಅರಣ್ಯ ಇಲಾಖೆ ಮಂತ್ರಿಯಾಗಿದ್ದ ಅರವಿಂದ ಲಿಂಬಾವಳಿ ಅವರನ್ನು ಬಸವರಾಜ ಬೊಮ್ಮಾಯಿ ಮಂತ್ರಿಮಂಡಲ ರಚನೆ ಮಾಡಿದಾಗ ಕೈಬಿಡಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆತ್ಮೀಯರೂ ಆಗಿರುವ ಲಿಂಬಾವಳಿ ಅವರ ಆರ್‌ಎಸ್‌ಎಸ್ ಹಿನ್ನಲೆಯನ್ನು ಪರಿಗಣಿಸಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ. ರಾಜ್ಯದ ಬಿಜೆಪಿಯಲ್ಲಿ ಅತಿ ಹೆಚ್ಚು ಬಾರಿ ಲೋಕಸಭೆಗೆ ಆಯ್ಕೆಯಾದ ಹೆಗ್ಗಳಿಕೆ ಹೊಂದಿರುವ ಮಾಜಿ ಸಚಿವ ಅನಂತ ಕುಮಾರ ಹೆಗಡೆಯವರ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬರುತ್ತಿದೆ ಎಂದೂ ಹೇಳಲಾಗಿದೆ. ಆದರೆ ಈ ಬಗ್ಗೆ ಪಕ್ಷದಿಂದಲೇ ಸ್ಪಷ್ಟವಾಗಿ ಮಾಹಿತಿ ಬರಬೇಕಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗಿದ್ದ ಅನಂತ ಕುಮಾರ ತಮಗೆ ಆಗಾಗ ಕಾಡುವ ಅನಾರೋಗ್ಯದ ಸಮಸ್ಯೆಯಿಂದಲೂ ರಾಜಕೀಯ ಚಟುವಟಿಕೆಗಳಿಂದ ದೂರವುಳಿದಿದ್ದಾರೆ ಎಂದೂ ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *