Ad Widget .

ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ| ರಾಜ್ಯದಲ್ಲಿ ಶೀಘ್ರದಲ್ಲೇ 100 ಪೊಲೀಸ್ ಠಾಣೆಗಳ ನಿರ್ಮಾಣ – ಗೃಹಸಚಿವ ಅರಗ‌ ಜ್ಞಾನೇಂದ್ರ

Ad Widget . Ad Widget .

ಸುಬ್ರಹ್ಮಣ್ಯ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದ್ದು ಸದ್ಯದಲ್ಲಿಯೇ ಸುಮಾರು 100 ಪೊಲೀಸ್ ಠಾಣೆಗಳ ಹೊಸ ಕಟ್ಟಡ ಕಾಮಗಾರಿಯನ್ನು ₹ 200 ಕೋಟಿ ವೆಚ್ಚದಲ್ಲಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಕಟ್ಟಡಕ್ಕೆ ₹ 1 ಕೋಟಿ ಅನುದಾನ ನಿಗದಿಪಡಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Ad Widget . Ad Widget .

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಯಲ್ಲಿ ವಾರ್ಷಿಕ 4 ಸಾವಿರ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. ಈಗ ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ’ ಎಂದರು.

‘ವೀರ ಸಾವರ್ಕರ್ ಸ್ವಾತಂತ್ರ್ಯಯೋಧ. ಅಂತಹವರ ಸ್ಮಾರಕ ಕಟ್ಟುವುದನ್ನು ವಿರೋಧಿಸುವುದು, ಈ ದೇಶದ ವ್ಯವಸ್ಥೆಯನ್ನೇ ವಿರೋಧಿಸಿದಂತೆ. ಹೊಸ ಪೀಳಿಗೆಗೆ ಸಾವರ್ಕರ್ ಅಂಥವರ ಬದುಕು ತಿಳಿಸುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ ಎಂದಾದರೆ ಜನ ಅವರನ್ನು ವಿರೋಧಿಸುತ್ತಾರೆ’ ಎಂದರು.

ದೇಗುಲಕ್ಕೆ ಭೇಟಿ ನೀಡಿದ ವೇಳೆ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್ ಮತ್ತಿತ್ತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *