Ad Widget .

ಭಾರೀ ಮಳೆ ಹಿನ್ನೆಲೆ| ತಮಿಳುನಾಡಿನ ಹಲವೆಡೆ ಶಾಲಾ ಕಾಲೇಜಿಗೆ ರಜೆ|

Ad Widget . Ad Widget .

ಚೆನ್ನೈ: ತಮಿಳುನಾಡಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಹಾರ ಕೇಂದ್ರಗಳಲ್ಲಿ 5000ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget .

ತಮಿಳುನಾಡಿನ ಹಲವು ಕಡೆ ಭಾರಿ ಮಳೆ ಮುಂದುವರೆದಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪುದುಚೇರಿ, ಕಾರೈಕಲ್ ನಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಸರ್ಕಾರ ಇವತ್ತು ಭಾರೀ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

Leave a Comment

Your email address will not be published. Required fields are marked *