ಬೆಂಗಳೂರು : ಮುಂದಿನ ವಾರದಿಂದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಝೈಡಸ್ ಕ್ಯಾಡಿಲಾ ಕಂಪನಿಯು ಅಭಿವೃದ್ಧಿಪಡಿಸಿರುವ ಝೈಕೋವ್ ಡಿ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಒಂದು ಕೋಟಿ ಡೋಸ್ ಲಸಿಕೆ ಖರೀದಿಗೆ ತೀರ್ಮಾನಿಸಲಾಗಿದ್ದು,ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಲೇ ರಾಜ್ಯಾದ್ಯಂತ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇ. 89 ರಷ್ಟು ಜನರಿಗೆ ಕೊರೊನಾ ಮೊದಲ ಡೋಸ್ ನೀಡಲಾಗಿದೆ. ಶೇ. 48 ರಷ್ಟು ಜನರಿಗೆ 2 ನೇ ಡೋಸ್ ನೀಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿರುವುದು ನಿಜ. ಆದರೆ ಪೋಷಕರ ಹಿತದೃಷ್ಟಿಯಿಂದ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.