ಮಂಗಳೂರು: ನಗರದ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮೃತ ಮಹಿಳೆಯನ್ನು ಪೂರ್ಣಿಮಾ(34) ಎಂದು ಗುರುತಿಸಲಾಗಿದೆ. ಇವರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಪೂರ್ಣಿಮಾ ಕಾವೂರು ನಿವಾಸಿಯಾಗಿದ್ದು ಪಡೀಲಿನಿಂದ ಮರೋಳಿ ದಾರಿಯಾಗಿ ಮನೆಯತ್ತ ಸಾಗುತ್ತಿದ್ದರು.
ಡಿಕ್ಕಿಯ ರಭಸಕ್ಕೆ ಮಹಿಳೆ ಡಾಮರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವು ಕಂಡಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.