Ad Widget .

1947 ರಲ್ಲಿ ಸ್ವಾತಂತ್ರ್ಯ ಅಲ್ಲ, ಭಿಕ್ಷೆ ಸಿಕ್ಕಿದ್ದು- ಕಂಗನಾ ರಣಾವತ್

Ad Widget . Ad Widget .

ಡಿಜಿಟಲ್‌ ಡೆಸ್ಕ್‌ : ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇತ್ತೀಚೆಗೆ ನಡೆದ ಖಾಸಗಿ ಚಾನಲ್‌ನ ಕಾರ್ಯಕ್ರಮವೊಂದರಲ್ಲಿ ”1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ.

Ad Widget . Ad Widget .

ಸಧ್ಯ ಈ ಹೇಳಿಕೆಯನ್ನ ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಕಂಗನಾರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಇನ್ನು ಕಂಗನಾ ಹೇಳಿಕೆ ವಿರುದ್ಧ ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಅಂದ್ಹಾಗೆ, ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ‘ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ‌ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’? ಎಂದು ಪ್ರಶ್ನಿಸಿದ್ದಾರೆ.

Leave a Comment

Your email address will not be published. Required fields are marked *