Ad Widget .

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್

Ad Widget . Ad Widget .

ನವದೆಹಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ’ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Ad Widget . Ad Widget .

ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ.
ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ’ ಎಂದು ತಿರುಗೇಟು ನೀಡಿದೆ.

ಕಂಗನಾ ಹೇಳಿಕೆ ವಿಚಾರವಾಗಿ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ, ‘ಕಂಗನಾ ಅವರ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಅನುಮೋದಿಸುತ್ತಾರೆಯೇ? ಈ ಕುರಿತು ತಮ್ಮ ಮೌನವನ್ನು ಮುರಿದು ದೇಶಕ್ಕೆ ತಿಳಿಸಲಿ. ಇಲ್ಲದಿದ್ದಲ್ಲಿ ಅಂತಹವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ’ ಎಂದು ಟ್ವೀಟ್ ಮಾಡಿದ್ದಾರೆ.

ಕಂಗನಾ ಅವರಿಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

‘ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ’ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ತಿಳಿಸಿದ್ದಾರೆ.

ಕಂಗನಾ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದ ವರುಣ್‌ ಗಾಂಧಿ, ‘ಇದು ದೇಶ ವಿರೋಧಿ ಕೃತ್ಯ ಮತ್ತು ಕಂಗನಾ ಅವರನ್ನು ದೇಶವಿರೋಧಿ’ ಎನ್ನಬಹುದು ಎಂದು ತಿಳಿಸಿದ್ದಾರೆ.

ಕಂಗನಾ ಹೇಳಿಕೆ ವಿರುದ್ಧ ಆಮ್ ಆದ್ಮಿ ಪಕ್ಷವು ಮುಂಬೈ ಪೊಲೀಸರಿಗೆ ದೂರು ನೀಡಿದೆ.

Leave a Comment

Your email address will not be published. Required fields are marked *