Ad Widget .

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!?

Ad Widget . Ad Widget .

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದೆ. ನಿನ್ನೆ ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿದಂತ ಸ್ಪೋಟಕ ಬಾಂಬ್ ಗೆ ತಲ್ಲಣವೇ ಉಂಟಾಗಿದೆ. ಇಂದು ಮುಂದುವರೆದು ವಾಗ್ದಾಳಿ ನಡೆಸಿರುವಂತ ಅವರು, 2500 ಕೋಟಿ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

Ad Widget . Ad Widget .

ಈ ಎಲ್ಲದರ ನಡುವೆ ವಿವಾದ ರಹಿತ ನಾಯಕನಿಗೆ ಬಿಜೆಪಿ ಹೈಕಮಾಂಡ್ ಹುಡುಕಾಟ ನಡೆಸಿದ್ದು, ಶೀಫ್ರವೇ ಹೊಸ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಗಲಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ರಾಜ್ಯ ರಾಜಕೀಯದಲ್ಲಿ ಬಿಟ್‌ ಕಾಯಿನ್‌ ಪ್ರಕರಣ ತುಂಬಾನೇ ಸದ್ದು ಮಾಡ್ತಿದೆ. ಹೀಗಿರುವ ಮೊನ್ನೆಯಷ್ಟೇ ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದಾರೆ. ಆದರೆ ಅದನ್ನು ನಿರ್ಲಕ್ಷಿಸಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ. ಆದ್ರೆ, ಸಧ್ಯ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಬೊಮ್ಮಾಯಿ ಅವ್ರು ದೆಹಲಿಯಿಂದ ಹಿಂದಿರುಗುತ್ತಿದ್ದಂತೆ ಮಾಜಿ ಸಿಎಂ ಶೆಟ್ಟರ್‌ ಹುಬ್ಬಳ್ಳಿಯಿಂದ ನೇರವಾಗಿ ದೆಹಲಿಗೆ ತೆರಳಲಿದ್ದು, ಈ ದಿಢೀರ್‌ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣವಾಗಿದೆ.

ಬಿಟ್ ಕಾಯಿನ್ ವಿಚಾರದಲ್ಲಿ ಈಗಾಗಲೇ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಸ್ಪಷ್ಟನೆ ನೀಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ. ಸೂಕ್ತ ದಾಖಲೆಗಳಿದ್ದರೆ ಮಂಡಿಸಿ ಎಂದು ಈಗಾಗಲೇ ಹೇಳಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತಂತೆ ಇಂದು ಮಾತನಾಡಿರುವಂತ ಅವರು, ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಈಗಾಗಲೇ ಹೇಳಿದ್ದೇನೆ. ಕಾಂಗ್ರೆಸ್‌ ನಾಯಕರ ಆರೋಪಗಳಿಗೆ ಮತ್ತೆ ಮತ್ತೆ ಉತ್ತರಿಸುವ ಅಗತ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಮತ್ತೊಂದು ಕಡೆ ಕಾಂಗ್ರೆಸ್ ನ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಚೇರಿಯಲ್ಲಿ ಬಿಟ್ ಕಾಯಿನ್ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳೊಂದಿಗೆ ಸುದ್ದಿಗೋಷ್ಠಿ ನಡೆಸಿದಂತ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು, ಬಿಟ್ ಕಾಯಿನ್ ತನಿಖೆಯ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿರುವಂತ ಅವರು, ಸಿಟ್ಟಿಂಗ್ ಜಸ್ಜ್ ನಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *