ಲಕ್ನೋ : ದೇಶದಲ್ಲಿಯೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಅಂಬುಲೆನ್ಸ್ ಸೇವೆ ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ರಾಜ್ಯದ ಪಶುಸಂಗೋಪನೆ, ಮೀನುಗಾರಿಕೆ, ಡೈರಿ ಅಭಿವೃದ್ಧಿ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಈ ಯೋಜನೆ ಕುರಿತಾಗಿ ಮಾತನಾಡಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಅಂಬುಲೆನ್ಸ್ ಸೇವೆ ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಅಂಬುಲೆನ್ಸ್ ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೊಳ್ಳುತ್ತಿದೆ. 112 ತುರ್ತು ಸೇವೆ ನಂಬರ್ ನಂತೆಯೇ ಈ ಸೇವೆಯೂ ಕಾರ್ಯನಿರ್ವಹಣೆ ಮಾಡಲಿದೆ.
ಡಿಸೆಂಬರ್‌ನಲ್ಲಿ ಇದಕ್ಕಾಗಿ ಪ್ರತ್ಯೇಕ ಕಾಲ್ ಸೆಂಟರ್ ಪ್ರಾರಂಭವಾಗಲಿದೆ ಕರೆ ಮಾಡಿದ 20 ನಿಮಿಷದೊಳಗೆ ಅಂಬುಲೆನ್ಸ್ ಸ್ಥಳಕ್ಕೆ ಆಗಮಿಸಲಿದೆ. ಉತ್ತಮ ಗುಣಮಟ್ಟದ ವೀರ್ಯ ಹಾಗೂ ಭ್ರೂಣ ಕಸಿ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ತಳಿ ಸುಧಾರಣೆ, ಅಭಿವೃದ್ಧಿ ಯೋಜನೆಗೂ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ಹೇಳಿದ್ದಾರೆ.