ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಕೀಳಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ ಶ್ರೇಯಾ (18) ಎಂದು ಗುರುತಿಸಲಾಗಿದೆ. ಈಕೆ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದಳು.
ಶ್ರೇಯಾ ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಿಂದ ಹೊರಡುವ ಮೇಳೆ ತಾಯಿಗೆ ತಾನು ಕೆರೆಗೆ ತಾವರೆ ಹೂ ಬಿಡಲು ಹೋ ಗುವುದಾಗಿ ಹೇಳಿ ಹೋಗಿದ್ದ ಶ್ರೇಯಾ ಹಿಂತಿರುಗಿ ಬರದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಸಮೀಪ ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.