Ad Widget .

ವಿಧಾನಸೌಧದಲ್ಲಿ ಸ್ಯಾನಿಟೈಜರ್ ಕುಡಿದು ಆತ್ಮಹತ್ಯೆಗೆ ಯತ್ನ| ನ್ಯಾಯ ಸಿಗದೇ ಮನನೊಂದು ಕೃತ್ಯ|

Ad Widget . Ad Widget .

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೋರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ನಂದಕುಮಾರ್ (54) ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ ಎನ್ನಲಾಗಿದೆ.

Ad Widget . Ad Widget .

ಕೂಡಲೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದ ಕುಮಾರ್‌ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್‌ ಗುಟ್ಟಹಳ್ಳಿ ನಿವಾಸಿಯಾಗಿರುವ ನಂದಕುಮಾರ್‌ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸೌಧದಲ್ಲಾದರೂ ನ್ಯಾಯ ಸಿಗುತ್ತದೆ ಎಂದು ಯೋಚಿಸಿ ಬಂದ ನಂದಕುಮಾರ್ ಕೊಠಡಿ ಸಂಖ್ಯೆ 106ರ ಬಳಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ‌ ಯತ್ನಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *