Ad Widget .

ಮುಸ್ಲಿಂ ವಿದ್ಯಾರ್ಥಿನಿಯರನ್ನು ಎಳೆದೊಯ್ದು ಹಲ್ಲೆ ನಡೆಸಿ ದೌರ್ಜನ್ಯ| ಸಂಘ ಪರಿವಾರದ ಮೇಲೆ ಆರೋಪ|

ಮಡಿಕೇರಿ: ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಸಂಘ ಪರಿವಾರದ ಕಾರ್ಯಕರ್ತರು ಕಟ್ಟಡವೊಂದಕ್ಕೆ ಎಳೆದೊಯ್ದು ರಕ್ತಬರುವಂತೆ ಗುಂಪು ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಶನಿವಾರ ಸಂತೆಯಲ್ಲಿ ಗುರುವಾರ ನಡೆದಿದೆ.

Ad Widget . Ad Widget .

ಹಲ್ಲೆಗೊಳಗಾದ ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಶನಿವಾರ ಸಂತೆಯ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದು, ಸದ್ಯ ಕೊಡ್ಲಿಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

ವಿದ್ಯಾರ್ಥಿನಿಯರು ಗುರುವಾರ ತರಗತಿಗೆ ತೆರಳುತ್ತಿದ್ದ ವೇಳೆ ಅವರಿಬ್ಬರ ಹಿಂದೂ ಸ್ನೇಹಿತೆಯೊಬ್ಬಳು ಓರ್ವ ವಿದ್ಯಾರ್ಥಿನಿಯ ಬುರ್ಖಾವನ್ನು ಪಡೆದು ಸಂಜೆ ಹಿಂದಿರುಗಿಸುವುದಾಗಿ ತಿಳಿಸಿದ್ದಳು. ಅದರಂತೆ ಈ ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಬುರ್ಖಾವನ್ನು ಹಿಂದೂ ವಿದ್ಯಾರ್ಥಿನಿಗೆ ನೀಡಿದ್ದಳು.

ತರಗತಿ ಬಿಟ್ಟು ಸಂಜೆಯಾಗುತ್ತಾ ಬಂದರೂ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ತಂದು ಕೊಟ್ಟಿರಲಿಲ್ಲ. ಆಗ ಮುಸ್ಲಿಮ್ ವಿದ್ಯಾರ್ಥಿಗಳು ಬಸ್ಸ್ ಗಾಗಿ ಶನಿವಾರಸಂತೆ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಅಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್ ಒಂದಕ್ಕೆ ಎಳೆದೊಯ್ದು ವಿಚಾರಿಸಿ ಹಲ್ಲೆ ನಡೆಸಿದ್ದಾರೆ‌ ಎನ್ನಲಾಗಿದೆ. ಈ ವೇಳೆ ಹಿಂದೂ ಯುವತಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆಂದೂ, ನಾಳೆಯಿಂದ ಶನಿವಾರಸಂತೆಗೆ ಬಂದರೆ ಆ್ಯಸಿಡ್ ದಾಳಿ ನಡೆಸುವುದಾಗಿಯೂ ದುಷ್ಕರ್ಮಿಗಳು ಬೆದರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ಅಲ್ಲಿಂದ ರಕ್ಷಿಸಿ ಸಂಬಂಧಿಕರೊಂದಿಗೆ ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಮನೆಗೆ ಬಂದು ವಿದ್ಯಾರ್ಥಿನಿಯರು ವಿಷಯ ತಿಳಿಸಿದ್ದು, ಅವರ ಕೈಕಾಲುಗಳಲ್ಲಿ ಗೀರಿದ ಗಾಯಗಳನ್ನು ಕಂಡ ಪೋಷಕರು ತಕ್ಷಣ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ.

ಸ್ಥಳಕ್ಕೆ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್ ಕುಮಾರ್, ದಲಿತ ಹಿತರಕ್ಷಣಾ ಒಕ್ಕೂಟದ ತಾಲೂಕು ಅಧ್ಯಕ್ಷ ವಸಂತ್, ದಲಿತ ಮುಖಂಡರಾದ ಜನಾರ್ದನ್ ಜೆ ಎಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಔರಗ ಜೇಬ್, ಗ್ರಾ.ಪಂ.ಸದಸ್ಯರಾದ ಪ್ರಸನ್ನ, ಸ್ಥಳೀಯ ಮಸೀದಿಗಳ ಅಧ್ಯಕ್ಷರು, ಶನಿವಾರಸಂತೆ ಗ್ರಾ.ಪಂ.ಸದಸ್ಯ ಸರ್ದಾರ್ ಆಹ್ಮದ್ ಸೇರಿದಂತೆ ಹಲವು ಮುಖಂಡರು ಆಗಮಿಸಿ ತಕ್ಷಣ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸುವಂತೆ ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *