Ad Widget .

ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್|

Ad Widget . Ad Widget .

ಕೋಲಾರ: ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್​ಗೆ ಕರೆ ಕೊಟ್ಟಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ.

Ad Widget . Ad Widget .

ಕೋಲಾರ ಬಂದ್​ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದು, ಅವರಿಗೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ‌ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಪ್ರಮೋದ್​ ಮುತಾಲಿಕ್​ ಅವರು ಕೋಮು ಪ್ರಚೋದನಾ ಭಾಷಣ ಮಾಡಿರುವ ಉದಾಹರಣೆ ಇದೆ. ಈ ಕಾರಣದಿಂದ ಪ್ರಮೋದ್ ಮುತಾಲಿಕ್​ಗೆ ನವೆಂಬರ್ 18ರಂದು ಪ್ರವೇಶಕ್ಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಅಲ್ಲದೆ, ಆಡಿಯೋ-ವಿಡಿಯೋ ಭಾಷಣ ಮಾಡದಂತೆಯೂ ನಿರ್ಬಂಧಿಸಲಾಗಿದೆ.

ಇನ್ನು ಬಂದ್​ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಯುವಕರು ಬಲವಂತವಾಗಿ ಬಸ್​ಗಳನ್ನು ತಡೆದು ನಿಲ್ದಾಣ ಬಂದ್ ಮಾಡಿಸುತ್ತಿದ್ದಾರೆ. ನಗರದ ಟೇಕಲ್ ವೃತ್ತದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ಕಂಪನಿಯ ಬಸ್​ಗಳನ್ನು ತಡೆಯಲಾಗಿದೆ. ಪೊಲೀಸರ ಮಧ್ಯ ಪ್ರವೇಶದಿಂದ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Leave a Comment

Your email address will not be published. Required fields are marked *