Ad Widget .

ಮಂಗಳೂರು ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ವಶ| ಸುಳ್ಯ ಮೂಲದ ವ್ಯಕ್ತಿಯ ಬಂಧನ|

Ad Widget . Ad Widget .

ಮಂಗಳೂರು: ಅಕ್ರಮ ಸಾಗಾಟದ 34.32ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು‌ ವಶಪಡಿಸಿಕೊಂಡಿದ್ದಾರೆ.

Ad Widget . Ad Widget .

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಈ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತನಿಂದ 681 ಗ್ರಾಂ ತೂಕದ 34,32,240 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *