ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ|

Ad Widget ... ..

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರ ಗುಂಪೊಂದು ಹಿಂಬಾಲಿಸಿಕೊಂಡು ಬಂದಿದ್ದು, ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು ಸಂಜೆ ನಗರದ ನೆಲ್ಲಿಕಟ್ಟೆಯಲ್ಲಿ ನಡೆದಿದೆ.

Ad Widget

ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ಗೆಳೆಯರಲ್ಲಿ ತಿಳಿಸಿದ್ದಾರೆ. ಆಗ ಸಹಪಾಠಿ ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರಲ್ಲಿ ಪ್ರಶ್ನಿಸಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಚಕಮಕಿ ಯಾಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ಪುತ್ತೂರು ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *