ಇಂದು ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್ ಭರ್ಜರಿ ಗೆಲವು ಸಾಧಿಸಿದೆ. ನ್ಯೂಜಿಲೆಂಡ್ ನೀಡಿದ ಟಾರ್ಗೆಟ್ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್ ರಾಹುಲ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 17.1 ಓವರ್ನಲ್ಲಿ 154 ರನ್ ಗಳಿಸಿ ಗೆದ್ದು ಬೀಗಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು.
ಕಿವೀಸ್ ಪರ ಬ್ಯಾಟಿಂಗ್ ಮಾಡಿದ ಮಾರ್ಟಿನ್ ಗಪ್ಟಿಲ್ 31, ಡೇರಿಲ್ ಮಿಚೆಲ್ 31, ಮಾರ್ಕ್ ಚಾಪ್ಮನ್ 21, ಗ್ಲೆನ್ ಫಿಲಿಪ್ಸ್ 34, ಟಿಮ್ ಸೀಫರ್ಟ್ 13 ರನ್ ಬಾರಿಸಿದರು.
ಇನ್ನು, ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ 65, ರೋಹಿತ್ ಶರ್ಮಾ 55 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಎರಡನೇ ಪಂದ್ಯ ಗೆಲ್ಲುವ ಮೂಲಕ ಭಾರತ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆದ್ದಿದೆ.