Ad Widget .

ನ.29ರಿಂದ ಡಿ.4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ| ಧರ್ಮನೆಲೆಯಲ್ಲಿ ಸಕಲ ಸಿದ್ದತೆಗಳು ಪೂರ್ಣ|

Ad Widget . Ad Widget .

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನ.29ರಿಂದ ಡಿ.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ಡಿ.3ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget .

ಡಿ.2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.

ನ.3ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಡಾ.ಪಿ. ಗಜಾನನ ಶರ್ಮ, ಚಿತ್ರದುರ್ಗದ ಡಾ.ಪಿ. ಚಂದ್ರಿಕಾ ಮತ್ತು ಬೆಂಗಳೂರಿನ ಡಾ.ಕೆ.ಪಿ. ಪುತ್ತೂರಾಯ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ರಾತ್ರಿ 9ರಿಂದ ಉತ್ಸವಗಳು ನಡೆಯಲಿದ್ದು, ನ. 29ರಂದು ಹೊಸಕಟ್ಟೆ ಉತ್ಸವ, ನ.30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ, ಡಿ. 3ರಂದು ಗೌರಿಮಾರುಕಟ್ಟೆ ಉತ್ಸವ, ಲಕ್ಷ ದೀಪೋತ್ಸವ, ಡಿ.4ರಂದು ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ಜರುಗಲಿದೆ.

Leave a Comment

Your email address will not be published. Required fields are marked *