ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಸಹಕಾರಿ ಧುರೀಣ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಣದಿಂದ ದೂರ ಉಳಿಯುವ ಅಚ್ಚರಿಯ ನಿರ್ಧಾರ ಮಾಡಿದ್ದಾರೆ.
ದ.ಕ, ಉಡುಪಿ ಉಭಯ ಜಿಲ್ಲೆಗಳ ಸಹಕಾರಿಗಳು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣೆಗೆ ಸ್ಪರ್ಧಿಸುವ ಮನ ಮಾಡಿದ್ದರು . ಅ. 23 ರಂದು ಈ ಬಗ್ಗೆ ನಾಮಪತ್ರ ಸಲ್ಲಿಸುವುದಾಗಿಯೂ ಅವರು ಈ ಹಿಂದೆ ತಿಳಿಸಿದರು .
ಆದರೇ ಕಾಂಗ್ರೇಸ್ ಪಕ್ಷದಿಂದ ತಮ್ಮ ಚಿಹ್ನೆಯಡಿ ಸ್ಪರ್ಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಜಿಲ್ಲೆಯ ವಿವಿಧ ಕಾಂಗ್ರೇಸ್ ಮುಖಂಡರುಗಳು ಒತ್ತಾಯಿಸಿದರು. ಈ ಬಗ್ಗೆ ಕಳೆದ ಎರಡು ಮೂರು ದಿನಗಳಿಂದ ಸಹಕಾರಿ ಕ್ಷೇತ್ರದ ವಿವಿಧ ಮುಖಂಡರ ಜತೆ ನಿರಂತರವಾಗಿ ರಾಜೇಂದ್ರ ಕುಮಾರ್ ಮಾತುಕತೆ ನಡೆಸುತ್ತಿದ್ದರು. ಆ ಬಳಿಕ ಇದೀಗ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿಂದ ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಎಸ್‌ಡಿಸಿಸಿ ಬ್ಯಾಂಕ್ ಅನ್ನು ದುರುಪಯೋಗ ಮಾಡಲಾಗುತ್ತಿದೆ. ಸಹಕಾರಿ ಹಣವನ್ನು ದುರುಪಯೋಗ ಪಡಿಸಲಾಗುತ್ತಿದೆ. ಅಕ್ರಮ ಎಸಗಲಾಗುತ್ತಿದೆ, ನವೋದಯ ಟ್ರಸ್ಟ್ ಸ್ಥಾಪನೆ ಮಾಡಿರುವುದಕ್ಕೆ ಆಕ್ಷೇಪ ಇಲ್ಲ. ಆದರೆ ನವೋದಯ ಟ್ರಸ್ಟ್ ಅನ್ನು ಬ್ಯಾಂಕಿನಲ್ಲಿ ಅವಕಾಶ ನೀಡಿರುವುದು ಕಾನೂನು ಬಾಹಿರ ವಾಗಿದೆ.
ಎಸ್‌ಸಿಡಿಸಿಸಿ ಬ್ಯಾಂಕಿನ 19 ಲಕ್ಷ ರೂಪಾಯಿ ಹಣವನ್ನು ಪ್ರತಿ ತಿಂಗಳು ನವೋದಯ ಟ್ರಸ್ಟ್‌ಗೆ ಕಾನೂನು ಬಾಹಿರವಾಗಿ ನೀಡಲಾಗುತ್ತಿದೆ. ಅಕ್ರಮಕ್ಕೆ ಸಹಕಾರಿ ಇಲಾಖೆಯ ಅಧಿಕಾರಿಗಳ ಸಹಕರಿಸುತ್ತಿದ್ದಾರೆ. ಅಕ್ರಮಕ್ಕೆ ಅಧಿಕಾರಿಗಳು ಸಹಕರಿಸುತ್ತಿರುವುದನ್ನು ಸಹಿಸೋದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ನಿನ್ನೆಯಷ್ಟೇ ವಾಗ್ದಾಳಿ ಮಾಡಿದ್ದರು.