ಹಿಂದೂ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

Ad Widget ... ..

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕಿಯನ್ನು ಲೈಂಗಿಕ ದೌರ್ಜನ್ಯದ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಟುಂಬಸ್ಥರ ಪ್ರಕಾರ ಶುಕ್ರವಾರ ಸಂಜೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕನ ಶವ ಶನಿವಾರ ಖೈರ್‌ಪುರ ಮಿರ್ ಪ್ರದೇಶದ ಬಾಬರ್ಲೋಯ್ ಪಟ್ಟಣದ ನಿರ್ಜನ ಮನೆಯಲ್ಲಿ ಪತ್ತೆಯಾಗಿದೆ.

Ad Widget

ಅಪ್ರಾಪ್ತ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿರುವುದಾಗಿ ತಿಳಿದುಬಂದಿದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಂದಿದ್ದಾರೆ . ಇಗಾಗಲೇ ಇಬ್ಬರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಇಂತಹ ಎರಡನೇ ಘಟನೆಯಾಗಿದೆ ಎಂದು ಮಕ್ಕಳ ರಕ್ಷಣಾಧಿಕಾರಿ ಜುಬೇರ್ ಮಹಾರ್ ತಿಳಿಸಿದ್ದಾರೆ. ಈ ಹಿಂದೆ ಸುಕ್ಕೂರ್ ಜಿಲ್ಲೆಯ ಸಲೇಹ್ ಪಾಟ್ ನಲ್ಲಿ ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಈ ಘಟನೆಗಳ ನಂತರ ಜನ ಭಯಭೀತರಾಗಿದ್ದಾರೆ.

Leave a Comment

Your email address will not be published. Required fields are marked *