Ad Widget .

ಮಂಗಳೂರು: ಅತ್ಯಾಚಾರ ನಡೆಸಿ‌ ಎಂಟು ವರ್ಷದ ಕಂದಮ್ಮನ ಕೊಲೆಗೈದ ಕಿರಾತಕರು..!?

ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.

Ad Widget . Ad Widget .

ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ, ಶವವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ 30ರಷ್ಟು ಜನ ಕೆಲಸ ಮಾಡುತ್ತಾರೆ. ಇಂದು ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *