Ad Widget .

ರಾಜ್ಯ ಸರಕಾರದಿಂದ ‘ಮಳೆಹಾನಿ’ ಪರಿಹಾರ ಘೋಷಣೆ |ತಕ್ಷಣ ಹಣ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ|

Ad Widget . Ad Widget .

ಬೆಂಗಳೂರು : ವರುಣನ ಆರ್ಭಟಕ್ಕೆ ರಾಜ್ಯದ ಹಲವು ಭಾಗಗಳು ತತ್ತರಿಸಿದ್ದು, ಸದ್ಯ ಮಳೆಯಿಂದ ಭಾರಿ ಹಾನಿಯಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

Ad Widget . Ad Widget .

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಆಯಾ ಜಿಲ್ಲಾ ಡಿಸಿಗೆ ಸೂಚಿಸಿದ್ದೇನೆ’ ಎಂದರು.

ಅದ್ರಂತೆ, ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ರೂಪಾಯಿ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಪ್ರವಾಹ ಪೀಡಿತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಆಗಿದ್ದು, ರಾಜ್ಯದ 16 ಜಿಲ್ಲೆಗಳಿಗೆ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ. ಜುಲೈ, ಆಗಸ್ಟ್‌ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಸರ್ಕಾರ ಈ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಅಡಿಯಲ್ಲಿ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.

Leave a Comment

Your email address will not be published. Required fields are marked *