Ad Widget .

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ರೋಹಿತ್ ಶರ್ಮ ಭರ್ಜರಿ ಬ್ಯಾಟಿಂಗ್, ಅಕ್ಷರ್ ಪಟೇಲ್ ಬೌಲಿಂಗ್ ನೆರವಿನಿಂದ 73 ರನ್ ಜಯಗಳಿಸಿದೆ.

Ad Widget . Ad Widget .

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ರೋಹಿತ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಇಶಾನ್ ಕಿಶನ್ 29, ಶ್ರೇಯಸ್ 25, ವೆಂಕಟೇಶ್ ಅಯ್ಯರ್ 20 ರನ್ ಗಳಿಸಿದರು. ನ್ಯೂಜಿಲೆಂಡ್ ಪರವಾಗಿ ಸ್ಯಾಂಟ್ನರ್ ಮೂರು ವಿಕೆಟ್ ಪಡೆದರು.

Ad Widget . Ad Widget .

185 ಗೆಲುವಿನ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 17.2 ಓವರ್ ಗಳಲ್ಲಿ ಎಲ್ಲಾ ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿದೆ. ಅಕ್ಷರ್ ಪಟೇಲ್ ಮೂರು ವಿಕೆಟ್ ಪಡೆದಿದ್ದಾರೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ 3 -0 ಯಿಂದ ಕ್ಲೀನ್ ಸ್ವೀಪ್ ಮಾಡಿದೆ.

Leave a Comment

Your email address will not be published. Required fields are marked *