ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ

Ad Widget ... ..

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ad Widget

ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *