ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ

Ad Widget ... ..

ಸುಳ್ಯ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ದೂರವಾಣಿ ಮೂಲಕ ಲಕ್ಷಾಂತರ ಹಣ ವಂಚಿಸಿರುವುದಾಗಿ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Ad Widget

ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ ಎಂಬವರಿಗೆ ಅಪರಿಚಿತರು ದೂರವಾಣಿ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದರು. ಹಾಗಾಗಿ ಅವರಿಂದ 4,31,500 ರೂಪಾಯಿಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದಾರೆ. ಈಗ ಉದ್ಯೋಗ ನೀಡದೇ ವಂಚಿಸಿದ್ದಾರೆ.

ಈ ಹಣವನ್ನು ವಾಪಾಸ್ ಮರಳಿಸಬೇಕೆಂದು ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನ.21ರಂದು ದೂರು ನೀಡಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *