Ad Widget .

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

Ad Widget . Ad Widget .

ಹೊನ್ನಾವರ: ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವಿಶಾಲ ಗೌಡ (17) ಎನ್ನಲಾಗಿದೆ.

Ad Widget . Ad Widget .

ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಯಾಗಿದ್ದು, ಮುಗ್ವಾ ಹಳಗೇರಿ ಮೂಲದ ನಿವಾಸಿ ಎಂದು ತಿಳಿದು ಬಂದಿದೆ.

ಚಲಿಸುವ ರೈಲಿಗೆ ತಲೆಯಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಪರಿಣಾಮವಾಗಿ ವಿದ್ಯಾರ್ಥಿಯ ದೇಹ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿದೆ. ಇನ್ನೂ ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರ ಸಹಕಾರದೊಂದಿಗೆ ಮೃತದೇಹವನ್ನು ಸ್ಥಳಾಂತರಗೊಳಿಸಿದ್ದಾರೆ.

Leave a Comment

Your email address will not be published. Required fields are marked *