ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದ ಕೆಲ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ , ಈ ಹಿನ್ನೆಲೆ ಮಕ್ಕಳಿಗೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.