Ad Widget .

ಕುಕ್ಕೆ: ಡಿ.1ರಿಂದ ಜಾತ್ರಾರಂಭ| ಡಿ.3 ಲಕ್ಷ ದೀಪೋತ್ಸವ, ಡಿ.9ರಂದು ವೈಭವದ ಚಂಪಾಷಷ್ಠಿ ಮಹೋತ್ಸವ|

Ad Widget . Ad Widget .

ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರಾ ಉತ್ಸವ ಸಮಾಪನಗೊಳ್ಳಲಿದೆ.

Ad Widget . Ad Widget .

ಡಿ.9ರಂದು ಚಂಪಾಷಷ್ಠಿಯ ವೈಭವದ ಬ್ರಹ್ಮ ರಥೋತ್ಸವ ಕ್ಷೇತ್ರದಲ್ಲಿ ಜರುಗಲಿದೆ. ಉದ್ಯಮಿ ದಿ.ಮುತ್ತಪ್ಪ ರೈ ಸೇವಾ ರೂಪದಲ್ಲಿ ನೀಡಿದ ಬ್ರಹ್ಮರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢನಾಗಿ ಲಕ್ಷಾಂತರ ಭಕ್ತರಿಗೆ ದರ್ಶನ ಭಾಗ್ಯ ನೀಡಲಿದೆ. ಚಂಪಾಷಷ್ಠಿಯ ಈ ವೈಭವ ಕಾಣಲು, ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ.

ಡಿ.3ರಂದು ಲಕ್ಷದೀಪೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.1ರಂದು ಜಾತ್ರೆ ಆರಂಭವಾಗಿ ಡಿ.3ರಂದು ಲಕ್ಷದೀಪೋತ್ಸವ, ಡಿ.7ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.8ರಂದು ಪಂಚಮಿ ರಥೋತ್ಸವ, ಡಿ.9ರ ಬೆಳಗ್ಗೆ ಚಂಪಾಷಷ್ಠಿ ಬ್ರಹ್ಮ ರಥೋತ್ಸವ, ಡಿ.10ರಂದು ಅವಭ್ರಥೋತ್ಸವ ಮತ್ತು ನೌಕಾ ವಿಹಾರ ಕ್ಷೇತ್ರದಲ್ಲಿ ನಡೆಯಲಿದೆ.

ಡಿ.15ರಂದು ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರೆ ಸಮಾಪನವಾಗುತ್ತದೆ. ಆ ದಿನ ರಾತ್ರಿ ದೇವಳದಲ್ಲಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದೆ. ಈ ವೇಳೆ ಕ್ಷೇತ್ರದ ಗಜರಾಣಿ ಯಶಸ್ವಿ ದೇವಳದ ಆವರೊಣದೊಳಗೆ ನೀರಿನಲ್ಲಿ ಮಕ್ಕಳೊಂದಿಗೆ ಆಡುವುದನ್ನು ಕಾಣುವುದೇ ಕಣ್ಣಿಗೆ ಹಬ್ಬವಾಗಿದೆ. ಕಳೆದ ಬಾರಿ ಸರಳವಾಗಿ ನಡೆದಿದ್ದ ಚಂಪಾಷಷ್ಠಿ ಉತ್ಸವ ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ.

ದಿನರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದ್ದು ಪುರುಷರಾಯ, ಹೊಸಳಿಗಮ್ಮ, ಹಾಗೂ ಪರಿವಾರ ದೈವಗಳ ನಡವಳಿ ನಡೆಯಲಿದೆ.

Leave a Comment

Your email address will not be published. Required fields are marked *