Ad Widget .

ದೇವಸ್ಥಾನದ ಭಗವಧ್ವಜ ತೆಗೆಸಲು ಎಸ್ಐ ಸೂಚನೆ| ಖಡಕ್ ವಾರ್ನಿಂಗ್ ನೀಡಿದ ಹಿಂಜಾವೇ|

Ad Widget . Ad Widget .

ಮಂಗಳೂರು: ‘ಕಾರಿಂಜ ಕ್ಷೇತ್ರದ ಸಮೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಜಾಗರಣ ವೇದಿಕೆ ಮತ್ತು ಜಿಲ್ಲಾಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ.

Ad Widget . Ad Widget .

ಈ ವಿಚಾರವಾಗಿ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ ವಿರುದ್ಧ ದೂರು ದಾಖಲಿಸುವ ಮೂಲಕ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಹಿಂದೂಗಳ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಹೇಳಿದರು.

ಕಾರಿಂಜ ಕ್ಷೇತ್ರದಲ್ಲಿ ಹಾಕಲಾದ ಭಗವಧ್ವಜವನ್ನು ತೆಗೆಯಬೇಕು ಎಂದು ಪುಂಜಾಲಕಟ್ಟೆ ಠಾಣೆಯ ಎಸ್ಸೈ ಸೌಮ್ಯ ಸೂಚಿಸಿದ್ದಾರೆ. ನಾವು ಆ ಧ್ವಜವನ್ನು ತೆಗೆಯುವುದಿಲ್ಲ. ಇನ್ನೊಂದು ವಾರದೊಳಗೆ ಅಂತಹ ಸಾವಿರ ಧ್ವಜ ಹಾಕಿಸುತ್ತೇವೆ. ತಾಕತ್ತಿದ್ದರೆ ಅದನ್ನು ತೆಗೆಸಬೇಕು ಎನ್ನುವ ಮೂಲಕ ಹಿಂಜಾವೇ ಪ್ರಾಂತೀಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *