ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ 24 ಗಂಟೆಗಳ ಬಿಗಿ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ತುರ್ತು ಸಭೆ ನಡೆಸಿದ ಸಿಎಂ, ಕಳೆದ ಒಂದು ವಾರದಲ್ಲಿನ ಕೋವಿಡ್ ಪಾಸಿಟಿವಿಟಿ ರೇಟ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರಾಜ್ಯದಲ್ಲಿ ಕೋವಿಡ್ ಟೆಸ್ಟ್, ನಿಯಂತ್ರಣದ ಬಗ್ಗೆ ವಿವರ ಪಡೆದ ಸಿಎಂ ಬೊಮ್ಮಾಯಿ, ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚಿಸಿದರು. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್ ಪರೀಕ್ಷೆ ನಡೆಸಲು ಹಾಗೂ ಕೋವಿಡ್ ಲಸಿಕೆ ಪಡೆದ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯಕ್ಕೆ ಲಾಕ್ ಡೌನ್ ಅಥವಾ ನೈಟ್ ಕರ್ಪ್ಯೂ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿವುದಿಲ್ಲ. ನೆರೆ ರಾಜ್ಯಗಳಿಂದ ಇತ್ತೀಚೆಗೆ ರಾಜ್ಯಕ್ಕೆ ಬಂದಿರುವವರಿಗೆ ಕಡ್ಡಾಯ ಮಾಸ್ ಟೆಸ್ಟ್ ಮಾಡಲಾಗುವುದು. ಅಲ್ಲದೇ ವಾರಕ್ಕೊಮ್ಮೆ ಕೋವಿಡ್ ಪರೀಕ್ಷೆ ಕಡ್ಡಾಯ, ರಾಜ್ಯದ ಎಲ್ಲಾ ಹಾಸ್ಟೆಲ್ ಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಕಂದಾಯ ಮಂತ್ರಿ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.