Ad Widget .

ಕಾರ್ಕಳ: ಬಟ್ಟೆ ಒಣಗಿಸಲು ಹೋದ ಮಹಿಳೆ ಮಹಡಿಯಿಂದ ಬಿದ್ದು ಸಾವು

Ad Widget . Ad Widget .

ಕಾರ್ಕಳ(: ಬಟ್ಟೆ ಒಣಗಿಸಲು ಹೋಗಿ 5 ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ.

Ad Widget . Ad Widget .

ಶ್ರೀಮತಿ ಕಮಲ ಪ್ರಿಯಾ ಬಿ (48) ಮೃತಪಟ್ಟವರು. ಇವರು ಕಳೆದ 10 ವರ್ಷದಿಂದ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿ ಗೃಹದ ಎ ಬ್ಲಾಕ್ ನ 5 ನೇ ಮಹಡಿಯಲ್ಲಿ ವಾಸಿಸುತ್ತಿದ್ದರು.

ನ.24 ರ ಸಂಜೆ ತಾವು ವಾಸ್ತವ್ಯವಿದ್ದ ಮನೆಯ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ನ.26 ರಂದು ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *