Ad Widget .

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ

Ad Widget . Ad Widget .

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget . Ad Widget .

ನೆಲ್ಯಾಡಿ ಮೆಸ್ಕಾಂ ಶಾಖಾ ಇಂಜಿನಿಯರ್ ರಮೇಶ್.ಬಿ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಹಲ್ಲೆ ನಡೆಸಿದವರು ಎನ್ನಲಾಗಿದೆ. ಗುಂಡ್ಯ ಎಂಬಲ್ಲಿ ವಿದ್ಯುತ್ ಸಂಪರ್ಕ ಪರಿಶೀಲನೆ ವೇಳೆ ಈ ಘಟನೆ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸಿ ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಇಬ್ಬರನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

Leave a Comment

Your email address will not be published. Required fields are marked *